ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಕಡ್ಡಾಯ😳ತಪ್ಪದೇ ಈ ವಿಡಿಯೋ ನೋಡಿ👆

Опубликовано: 16 Июнь 2026
на канале: SRV Tech in Kannada Youtube Channel ♥️💛
110
9

ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತು ಹಗಲಿರುಳು ಶ್ರಮಿಸುತ್ತಿರುವ ನನ್ನ ಸಹೋದರಿಯರಿಗೆ,
ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜುಗಳಿಗೆ ಪ್ರಯಾಣ ಬೆಳೆಸುವ ವಿದ್ಯಾರ್ಥಿನಿಯರಿಗೆ,
ಅನಾರೋಗ್ಯ, ಅಗತ್ಯ ವಸ್ತುಗಳ ಖರೀದಿ ಇನ್ನಿತರ ಕೆಲಸ ಕಾರ್ಯಗಳ ನಿಮಿತ್ತ ಪ್ರಯಾಣ ಮಾಡುವ ನಾಡಿನ ತಾಯಂದಿರಿಗೆ ಈ ಶಕ್ತಿ ಯೋಜನೆಯನ್ನು ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ.

ಆರ್ಥಿಕ ಸಂಕಷ್ಟದ ನಡುವೆಯೂ ಬದುಕಿನ ಉತ್ಸಾಹ ಕಳೆದುಕೊಳ್ಳದೆ, ಸವಾಲುಗಳನ್ನು ಮೆಟ್ಟಿನಿಂತು ಹೋರಾಟದ ಮೂಲಕ ಬದುಕು ಕಟ್ಟಿಕೊಂಡಿರುವ ಕನ್ನಡ ನೆಲದ ಪ್ರತಿ ಮಹಿಳೆಯೂ ನಮ್ಮ ಈ ಯೋಜನೆಯ ಹಿಂದಿನ ಪ್ರೇರಕ ಶಕ್ತಿ.

ನಾಡಿನ ಎಲ್ಲ ಮಹಿಳೆಯರು
ಈ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ ಎಂದು ಮನಸ್ಪೂರ್ತಿಯಾಗಿ ಹಾರೈಸುತ್ತೇನೆ.